LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ವಾಹನ ಅಡ್ಡಗಟ್ಟಿ ಕಿಡಿಗೇಡಿಗಳ ಗಲಾಟೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ, ಪುಂಡರ, ಕಿಡಿಗೇಡಿಗಳ ಹಾವಳಿ ಹೆಚ್ಚಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಸಾರ್ವಜನಿಕರಿಗೆ, ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ನಿನ್ನೆ ಸಂಜೆ ಇದೇ ರೀತಿ ಶಾಲಾ(School Van) ವಾಹನಕ್ಕೆ ಅಡ್ಡಗಟ್ಟಿ ದಾಂಧಲೆ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆದ ದೃಶ್ಯ ಈಗ ವೈರಲ್ ಆಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ವಾಹನ ಸೈಡ್ ಕೊಡಲಿಲ್ಲವೆಂದು ಗಲಾಟೆ ಮಾಡಿದ್ದಾರೆ.

ಕೆಎ 01 ಎಂಬಿ 5796 ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ ಸುಮಾರು 8 ಜನರ ತಂಡ ಪುಂಡಾಟಿಕೆ ಮೆರೆದಿದೆ. ಶಾಲಾ ವಾಹನದ ಕಿಟಕಿ ಗ್ಲಾಸ್ ಒಡೆದಿದೆ. ಇದರಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಸಾರ್ವಜನಿಕರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್(FIR) ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST