LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಂಗ ನಿರ್ದೇಶಕ, ಹಾಸ್ಯನಟ ಯಶವಂತ ಸರದೇಶಪಾಂಡೆ ನಿಧನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಂಗಭೂಮಿ ಕಲಾವಿದ, ಹಾಸ್ಯನಟ ಯಶವಂತ ಸರದೇಶಪಾಂಡೆ(60) ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿದ್ದರು. ಸೋಮವಾರ ಮುಂಜಾನೆ ಬೆಂಗಳೂರಿಗೆ ಬಂದಿದ್ದರು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರನ್ನು ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪತ್ನಿ ಮಾಲತಿ ಸಹ ರಂಗಭೂಮಿ ಹಾಗೂ ಕಿರುತರೆ ನಟಿಯಾಗಿದ್ದಾರೆ. ರಂಗಭೂಮಿ ಜೊತೆಗೆ ಅನೇಕ ಧಾರವಾಹಿ, ಸಿನಿಮಾಗಳಲ್ಲಿ ನಟಿಸಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು.

ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೋಮಾ ಪದವಿ ಪಡೆದಿದ್ದಾರೆ. ನಾಟಕ ರಚನೆ, ಚಲನಚಿತ್ರ ಸಂಭಾಷಣೆ ಕುರಿತು ನ್ಯೂಯಾರ್ಕ ವಿಶ್ವವಿದ್ಯಾಲಯದಿಂದ ವಿಶೇಷ ತರಬೇತಿ ಪಡೆದಿದ್ದರು. 60ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕ ಭಾಷೆಯ ಮೂಲಕವೇ ಎಲ್ಲರನ್ನೂ ರಂಜಿಸುತ್ತಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST