ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಹೊನ್ನಳ್ಳಿ ಗ್ರಾಮದ ನಾಟಿ ವೈದ್ಯ ಭೀಮರಾಯ ಸಂಗಪ್ಪ ಡಿಗ್ಗಿ ಅವರು ಕಳೆದ ಹಲವು ವರ್ಷಗಳಿಂದ ನಾಟಿ ವೈದ್ಯರಾಗಿ ಉಚಿತ ಸೇವೆ ನೀಡುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿರುವ ತಾಲೂಕು ಆಡಳಿತ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಿದೆ. ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರು ಪ್ರಮಾಣ ಪತ್ರ ನೀಡಿ ಸನ್ಮಾನಿಸಿದರು.
ಸಕ್ಕರೆ ಕಾಯಿಲೆ, ಮಧುಮೇಹ, ಮೂಲವ್ಯಾದಿ ಸೇರಿದಂತೆ ಹಲವಾರು ರೋಗಗಳಿಗೆ ದೇಸಿ ಹಾಗೂ ನಾಟಿ ವೈದ್ಯಕೀಯ ಪದ್ಧತಿಯ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ. ಇದಕ್ಕಾಗಿ ಯಾರಿಂದಲೂ ಇಂತಿಷ್ಟು ಎಂದು ಹಣ ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಅವರು ಎಷ್ಟೇ ಹಣ ನೀಡಿದರೂ ಪಡೆಯುತ್ತಾರೆ. ಇವರ ಸೇವೆಯನ್ನು ಪರಿಗಣಿಸಿ ಗೌರವಿಸಲಾಗಿದೆ.
ಈ ವೇಳೆ ತಾಲೂಕು ಪಂಚಾಯ್ತಿ ಪ್ರಭಾರ ಇಒ ಅನಿಲ ಹಳ್ಳಿ, ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ವೈ.ಸಿ.ಮಯೂರ, ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಪ್ರಜಾಸ್ತ್ರ ವೆಬ್ ಪತ್ರಿಕೆಯ ಸಂಪಾದಕ ನಾಗೇಶ ತಳವಾರ ಉಪಸ್ಥಿತರಿದ್ದರು.


