LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

21ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸನ್ಮಾನ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಮಕ್ಕಳ ಸಾಹಿತಿ ಹ.ಮ.ಪೂಜಾರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷ ಹ.ಮ.ಪೂಜಾರ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು-ಬೆಳವಣಿಗೆಯಲ್ಲಿ ಸಾಹಿತ್ಯ ಸಮ್ಮೇಳನಗಳು ಮಹತ್ವದ ಪಾತ್ರ ವಹಿಸುತ್ತವೆ. ಸಾಹಿತ್ಯದ ಮೂಲಕ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ತಮ್ಮನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸ್ಥಳಿಯ ಶಾಸಕ ಹಾಗೂ ಸಾಹಿತ್ಯಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಹ.ಮ.ಪೂಜಾರ ಅವರು ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರವಾಗಿದೆ. ಅವರ ಅನುಭವ ಮತ್ತು ಸಾಹಿತ್ಯದ ಕೊಡುಗೆಯಿಂದ ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಾಯ್.ಸಿ. ಮಯೂರ ಮಾತನಾಡಿ, ಹ.ಮ.ಪೂಜಾರ ಅವರ ಆಯ್ಕೆ ಜಿಲ್ಲೆಯ ಸಾಹಿತ್ಯ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಗೌರವಕಾರ್ಯದರ್ಶಿ ಆನಂದ ಶಾಬಾದಿ, ಮಹಾಂತೇಶ ನೂಲಾನವರ, ಮಾಜಿ ಅಧ್ಯಕ್ಷ ಶಿವಾನಂದ ಬಡಾನೂರ, ರಾಜಶೇಖರ ಪೂಜಾರಿ, ಸೈನಾಬಿ ಮಸಳಿ, ವರ್ಷಾ ಪಾಟೀಲ, ಅನಸೂಬಾಯಿ ಪರಗೊಂಡ, ಶಾಂತು ರಾಣಾಗೋಳ, ಜೈಭೀಮ ತಳಕೇರಿ, ಗುಂಡು ಬಾಣಿ, ಜಮೀರ ಮೋಮಿನ, ರಮೇಶ ಪೂಜಾರ, ಜ್ಯೋತಿ ಪೂಜಾರ, ಅಶ್ವಿನಿ ಲೋಣಿ, ಮಂಗಲಾ ಬಮ್ಮಣ್ಣಿ, ಸಾಧನಾ ಇಮಡೆ, ಹೇಮಾ ಬಡಿಗೇರ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಾಹಿತ್ಯಾಸಕ್ತರು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST