LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ನಿಧನ

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ(Hubballi): ಡಿಸೆಂಬರ್ 22ರ ರಾತ್ರಿ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಇದೀಗ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ವಿಚಾರ ತಿಳಿದು ಬಂದಿದೆ. ನಿಜಲಿಂಗಪ್ಪ ಬೇಪುರಿ(58) ಹಾಗೂ ಸಂಜಯ್ ಸವದತ್ತಿ(18) ಎನ್ನುವವರಿಬ್ಬರು ಮೃತಪಟ್ಟಿದ್ದಾರೆ.

ಕಿಮ್ಸ್ ನಲ್ಲಿ ಉಳಿದ 7 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಅಂದು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಗೆ ಒಬ್ಬರ ಕಾಲು ತಗುಲಿ ಅದು ಬಿದ್ದಿದೆ. ಆಗ ರಿಗ್ಯೂಲೇಟರ್ ಸಡಿಲಗೊಂಡಿದೆ. ದೇವರ ಮುಂದೆ ಹಚ್ಚಿದ ದೀಪದಿಂದಾಗಿ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST