ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ನಾಯಕರು ರಾಜ್ಯದ ನಾಯಕರೊಂದಿಗೆ ಸೋಮವಾರ ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಸಭೆಯ ಬಳಿಕ ಖರ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಮುಂಬರುವ ಉತ್ತರ ಪ್ರದೇಶ ಚುನಾವಣೆಯ ಸಂಬಂಧ ಸುದೀರ್ಘ ಸಭೆ ನಡೆಸಲಾಯಿತು. ಇಂಡಿಯಾ ಕೂಟದೊಂದಿಗೆ ಜೊತೆಯಾಗಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಬಲಿಷ್ಠವಾದ ಸರ್ಕಾರ ನೀಡಲಿದೆ. ಉತ್ತರ ಪ್ರದೇಶದ ಚುನಾವಣೆಯ ದೇಶಕ್ಕೆ ಹೊಸ ದಿಕ್ಕು ತೋರಿಸಲಿದೆ ಎಂದಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ 403 ಸ್ಥಾನಗಳನ್ನು ಹೊಂದಿದೆ. 181 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ಚಿಂತನೆ ನಡೆಸಿದೆ. ಸೀಟು ಹಂಚಿಕೆ ವಿಚಾರದಲ್ಲಿ ಸಮಾಜವಾದಿ ಪಕ್ಷ ಕುರಿತು ಗೊಂದಲ ಮೂಡಿದೆ. ಇದರ ನಡುವೆ ಕಾಂಗ್ರೆಸ್ ಸಭೆ ನಡೆಸಿದೆ.


