LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಶ್ರೀರಾಮುಲು ಪರ ನಿಂತು, ರೆಡ್ಡಿಗೆ ವಾಲ್ಮೀಕಿ ಸಮಾಜದವರ ಎಚ್ಚರಿಕೆ

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಶಾಸಕ ಜನಾರ್ದನ್ ರೆಡ್ಡಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಅವರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ವಾಲ್ಮೀಕಿ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಿಂದ ಜನಾರ್ದನ್ ರೆಡ್ಡಿ ಅವರನ್ನು ಹೊರ ಹಾಕಬೇಕು. ಅವರು ಕ್ಷಮೆ ಕೇಳಬೇಕು. ಶ್ರೀರಾಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೆ ಬೆಂಬಲ ನೀಡಿದ್ದಾರೆ ಎಂದರು.

ನೀನು ಕೀಳು ಜಾತಿಯವನು. ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಿದ್ದವನು ಎಂದೆಲ್ಲ ಶ್ರೀರಾಮುಲು ವಿರುದ್ಧ ಜನಾರ್ದನ್ ರೆಡ್ಡಿ ಮಾತನಾಡಿದ್ದಾರೆ. ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು. ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಮಾಜದ ಮುಖಂಡ ಜೋಳದರಾಶಿ ತಿಮ್ಮಪ್ಪ ಹೇಳಿದ್ದಾರೆ. ಈ ಸಂಬಂಧ ಎಲ್ಲ ಜಿಲ್ಲೆಗಳಲ್ಲಿ ಎಸ್ಪಿ ಅವರಿಗೆ ದೂರು ನೀಡುತ್ತೇವೆ ಎಂದಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST