LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತ ಗಣೇಶ್ ನಿಧನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮಾಧ್ಯಮ ಲೋಕದ ಸ್ನೇಹಿತರು, ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಸ್ತುತ ಟಿವಿ5 ಸುದ್ದಿ ವಾಹಿನಿಯಲ್ಲಿ ಔಟ್ ಪುಟ್ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಗಡಿ ತಾಲೂಕಿನ ತಾಳೆಕೆರೆ ಗ್ರಾಮದವರಾಗಿದ್ದಾರೆ. ಹುಟ್ಟೂರಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ತಿಳಿದು ಬಂದಿದೆ. ಕಸ್ತೂರಿ ಟಿವಿ ಸೇರಿ ಬೇರೆ ಬೇರೆ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ಕ್ರೈಂ ವರದಿಯಲ್ಲಿ ಎತ್ತಿದ ಕೈ ಇವರದು. ಇವರ ಪತ್ರಿಕಾ ಸೇವೆಗೆ ಹಲವು ಗೌರವ ಸನ್ಮಾನಗಳು ಸಂದಿವೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST