ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಇನ್ನೊಂದು ವರ್ಷ ಜಾಮೀನು ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಇವರ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ನಲ್ಲಿ ಭಾವುಕ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ.
ದರ್ಶನ್ ಫೋಟೋ ಜೊತೆಗೆ ಇದು ಮರೆಯದ ಹಾಡು ಅನ್ನೋ ಸಾಂಗ್ ನೊಂದಿಗೆ ಒಡೆದ ಹೃದಯದ ಇಮೋಜಿ ಹಾಕಿದ್ದಾರೆ. ಒಂದು ವರ್ಷದೊಳಗೆ ಉಳಿದಿರುವ 60 ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿಸಬೇಕು. ಇಲ್ಲದಿದ್ದರೆ ಒಂದು ವರ್ಷದ ಬಳಿಕ ಜಾಮೀನು ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.



