LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಭೂತನಾಳ ಕೆರೆಯಲ್ಲಿ 6 ಜನರ ಮೃತದೇಹ ಪತ್ತೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಆದರ್ಶನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಭೂತನಾಳ ಕೆರೆಯಲ್ಲಿ 6 ಜನರ ಮೃತದೇಹಗಳು ಬುಧವಾರ ಪತ್ತೆಯಾಗಿವೆ. ಇದರಿಂದಾಗಿ ಇಡೀ ನಗರದ ಜನತೆಯಲ್ಲಿ ಆತಂಕ ಮೂಡಿದೆ. ತೊರವಿಯ ಶಾಂತಿನಗರದ ನಿವಾಸಿ ಶೋಭಾ ಮಲ್ಲಿಕಾರ್ಜುನ ಜಾಲಗೇರಿ(35), ಇವರ ಮಕ್ಕಳಾದ ವಿದ್ಯಾ(15), ಸುವರ್ಣಾ(13), ತಿಪ್ಪರಾಯ(12), ಸಾನಿಕಾ(10) ಹಾಗೂ ವಿಕಾಶ(06) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ ಏನು ಎಂದು ನೋಡಿದರೆ ಪ್ರಾಥಮಿಕವಾಗಿ ತಿಳಿದು ಬಂದಿರುವುದು ಆಗಸ್ಟ್ 24 ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 6 ಜನರು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಮೃತ ಶೋಭಾ ಪತಿ ಮಲ್ಲಿಕಾರ್ಜುನ ಅವರು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಿಸಿದ್ದರು. ಕೌಟುಂಬಿಕ ಕಲಹದಿಂದಾಗಿ ಮನೆ ಬಿಟ್ಟು ಹೋಗಿದ್ದರು ಎಂದು ಹೇಳಲಾಗುತ್ತಿದೆ. ವಿಚಾರ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಬಿಎಲ್ ಡಿಇ ಆಸ್ಪತ್ರೆಗೆ ರವಾನಿಸುವ ಕೆಲಸ ನಡೆಯಿತು. ಈ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST