LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಅಕ್ರಮವಾಗಿ ಅಕ್ಕಿ ಸಾಗಾಟ, ಓರ್ವ ವಶಕ್ಕೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ರಾಷ್ಟ್ರೀಯ ಹೆದ್ದಾರಿ-52ರ ಅರ್ಜನಾಳ ಕ್ರಾಸ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 121.30 ಕ್ವಿಂಟಲ್ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದು ಅರ್ಶದ್ ದಾಂಡೇವಾಲೆ ಇವರ ಮೇಲೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದಾಳಿಯಲ್ಲಿ ಇಂಡಿ ತಾಲೂಕಿನ ಆಹಾರ ನಿರೀಕ್ಷಕರಾದ ಸಿದ್ರಾಮೇಶ ಹಲಸಂಗಿ, ಝಳಕಿ ಪಿಎಸ್‌ಐ ಮಂಜುನಾಥ ತಿರಕ್ಕಣ್ಣವರ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST