LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: 20ಕ್ಕೂ ಹೆಚ್ಚು ಪ್ರಕರಣಗಳು.. 42 ಆರೋಪಿಗಳ ಬಂಧನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2024ರಿಂದ 2026ರ ಅವಧಿಯಲ್ಲಿ ನಡೆದಿದ್ದ 20ಕ್ಕೂ ಹೆಚ್ಚು ಪ್ರಕರಣಗಳಿಗೆ ಸಂಬಂಧಿಸಿದಂತೆ 42 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಗುರುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಒಂದು ಕೋಟಿ 20 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ನಗದು, ಜೆಸಿಬಿ, ಪಿಕಪ್ ವ್ಯಾನ್, ಸ್ಕಾರ್ಪಿಯೋ, ಟ್ರ್ಯಾಕ್ಟರ್, ಬೈಕ್ ಹಾಗೂ ನೀರಿನ ಪಂಪ್ ಸೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇಂಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ, ಚಡಚಣದ ದೇವಸ್ಥಾನ ಕಳ್ಳತನ ಪ್ರಕರಣ, ಆಲಮೇಲದ ಫೈನಾನ್ಸ್ ವೊಂದರಲ್ಲಿ ನಡೆದಿದ್ದ ಕಳ್ಳತನ, ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿ ತಡೆದು ದರೋಡೆ ಮಾಡಿರುವ ಪ್ರಕರಣ ಸೇರಿದಂತೆ 20 ಕ್ಕೂ ಹೆಚ್ಚು ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಅವರು ತಿಳಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST