ಪ್ರಜಾಸ್ತ್ರ ಸುದ್ದಿ, (ಸಾಂದರ್ಭಿಕ ಚಿತ್ರ)
ಚಾಮರಾಜನಗರ(Chamarajanagara): ಶನಿವಾರ ರಾತ್ರಿ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕಾಡಾನೆ ದಾಳಿ ಮಾಡಿದ್ದರಿಂದ ವಾಚರ್ ವೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಜಿಲ್ಲೆಯ ಹನೂರ ವ್ಯಾಪ್ತಿಯಲ್ಲಿನ ವನ್ಯಧಾಮದಲ್ಲಿ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ(45) ಮೃತ ವ್ಯಕ್ತಿಯೆಂದು ತಿಳಿದು ಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಸಾಗಿಸಲಾಗಿದೆ. ಎರಡು ದಿನಗಳ ಹಿಂದೆ ಶ್ರೀಗಂಧ ಮರಗಳನ್ನು ಕಡೆಯಲಾಗಿತ್ತು. ಹೀಗಾಗಿ ಆರೋಪಿಗಳ ಪತ್ತೆಗಾಗಿ ಶನಿವಾರ ರಾತ್ರಿ ಸಿಬ್ಬಂದಿ ಗಸ್ತು ತಿರುಗುವಾಗ ಕಾಡಾನೆ ಮಹದೇಸ್ವಾಮಿ ಮೇಲೆ ದಾಳಿ ಮಾಡಿದೆ.



