ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ವಿದ್ಯಾರ್ಥಿಗಳ ಪ್ರತಿಭಟನೆ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ನಾವು ಸಿದ್ಧ. ಸದನ ನಡೆಯಲು ಬಿಡಿ ಎಂದು ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಮನವಿ ಮಾಡಿದ್ದಾರೆ. ಸಂಸತ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ. ವಿಪಕ್ಷಗಳು ಇಂದು ಮಧ್ಯಾಹ್ನ 2 ಗಂಟೆಯೊಳಗೆ ಸ್ಪೀಕರ್ ಅವರಿಗೆ ಲಿಖಿತವಾಗಿ ನೋಟಿಸ್ ನೀಡಬಹುದು ಎಂದರು.
ವಿಪಕ್ಷಗಳು ನೋಟಿಸ್ ನೀಡಿದರೆ ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಗುರುವಾರ ಮಧ್ಯಾಹ್ನ 3 ಗಂಟೆಯ ತನಕ ಚರ್ಚೆ ನಡೆಸಬಹುದು. ಎಲ್ಲ ವಿಚಾರಗಳ ಚರ್ಚೆಗೆ ಸರ್ಕಾರ ಸಿದ್ಧವಿದೆ ಅಂತಾ ವಿಪಕ್ಷಗಳಿಗೆ ತಿಳಿಸಿದರು.



