LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ನಾವು ವಿರೋಧಿಸುತ್ತೇವೆ: ರಾಹುಲ ಗಾಂಧಿ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಕೇಂದ್ರದ ವಿಶೇಷ ಅಧಿವೇಶನದಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಜಾರಿಗೆ ತರಲು ಬಿಜೆಪಿ ಸಿದ್ಧವಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ. ಮಸೂದೆ ತಡೆಯುವಷ್ಟು ಸಂಖ್ಯಾಬಲ ನಮ್ಮ ಬಳಿ ಇದೆಯೋ ಇಲ್ಲವೋ ಗೊತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಈ ಮಸೂದೆ ತರಲು ಬಿಜೆಪಿ ಹೊರಟಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಶುಕ್ರವಾರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಪಕ್ಷದ ಸಂಸದೀಯ ಸಭೆ ನಡೆಸಲಾಗಿದೆ. ಈ ವೇಳೆ ಕಾಂಗ್ರೆಸ್ ಸಂಸದರು ಭಾಗವಹಿಸಿದ್ದರು. ಶನಿವಾರ ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಲಾಗಿದೆ. ಲೋಕಸಭೆಯ ಈಗಿರುವ ಸಂಖ್ಯಾಬಲವನ್ನು ಉಳಿಸಿಕೊಳ್ಳಬೇಕು. ಮಹಿಳೆಯರಿಗೆ ಈಗಿರುವ ಸಂಖ್ಯಾಬಲದಲ್ಲಿಯೇ ಶೇಕಡ 33ರಷ್ಟು ಮೀಸಲಾತಿಯನ್ನು ಜಾರಿಗೊಳಿಸಬೇಕು. ಲೋಕಸಭೆಯಲ್ಲಿ ಈಗಿರುವ ವಿವಿಧ ರಾಜ್ಯಗಳಿಗೆ ಇರುವ ಪ್ರಾತಿನಿಧ್ಯದ ಅನುಪಾತವನ್ನು ಮುಂದಿನ 25 ವರ್ಷಗಳವರೆಗೆ ಮುಂದುವರೆಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಗೌರವ್ ಗೊಗೊಯ್ ಹೇಳಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST