ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಗಳ ಆಡಳಿತ ಅವಧಿ ಮುಗಿದು ಬಹಳ ದಿನವಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇಲ್ಲದೆ ಗ್ರಾಮದಲ್ಲಿನ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಹೀಗಾಗಿ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ಚರ ಖಂಡ್ರೆ, ಅಕ್ಟೋಬರ್, ನವೆಂಬರ್ ನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣೆ ನಡೆಯುತ್ತವೆ ಎಂದಿದ್ದಾರೆ.
ಶನಿವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಪಂಚಾಯ್ತಿಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿದೆ. ಈ ಕೆಲಸವನ್ನು ಈ ತಿಂಗಳು ಅಂತ್ಯದಲ್ಲಿ ಅಥವ ಮುಂದಿನ ತಿಂಗಳಲ್ಲಿ ಮುಗಿಸಿ ಮೀಸಲಾತಿ ನಿರ್ಧರಿಸಿ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು.
ರಾಜ್ಯ ಚುನಾವಣೆ ಆಯೋಗ 45 ದಿನಗಳಲ್ಲಿ ಚುನಾವಣೆ ನಡೆಸುತ್ತದೆ. ಈಗ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಸರ್ಕಾರಿ ಸಿಬ್ಬಂದಿ ಭಾಗಿಯಾಗಿದ್ದಾರೆ. ಹೀಗಾಗಿ ಚುನಾವಣೆ ನಡೆಸಲು ಕಾಲಾವಕಾಶ ಕೇಳಲಾಗಿದೆ. ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆ ನಡೆಸಲಾಗುವುದು ಅಂತಾ ತಿಳಿಸಿದರು.



