ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಟ ಪ್ರಜ್ವಲ್ ದೇವರಾಜ್ ಅಭಿನಯದ ಅಪ್ ಕಮಿಂಗ್ ‘ಕರಾವಳಿ’ ಸಿನಿಮಾದ ಡಬ್ಬಿಂಗ್ ಹಾಗೂ ಸಂಭಾವನೆ ವಿವಾದಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಕೆಲವರು ಬಂದು ಗಲಾಟೆ ಮಾಡಿರುವುದು ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಘಟನೆ ಕುರಿತು ನಿರ್ದೇಶಕ ಹಾಗೂ ಗುರುದತ್ತ ಗಾಣಿಗ ಫಿಲ್ಮ್ಸ್ ಸಂಸ್ಥೆ ಮಾಧ್ಯಮ ಪ್ರಕಟಣೆ ನೀಡಿದ್ದು, ಅದರಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆಯ ನಡುವೆಯಾದ ಒಪ್ಪಂದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅದು ಈ ಕೆಳಗಿನಂತಿದೆ.




