ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ತ್ವರಿತ ನ್ಯಾಯಾಲಯ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಯುವಕರ ಭವಿಷ್ಯ ಹಾಳು ಮಾಡಿದ್ದೇ ನೀವು. ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಲು ಅವಕಾಶ ನೀಡಿದ್ದೀರಿ. ಅದಕ್ಕೆ ಕಾರಣರಾದವರ ರಕ್ಷಣೆಗೆ ನಿಂತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮಾತಿಗೆ ಎಕ್ಸ್ ನಲ್ಲಿಯೇ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಬೇಡಿಕೆ ಸರಿಯಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಇಲ್ಲ ಅವರನ್ನು ವಜಾಗೊಳಿಸಿ ವಿದ್ಯಾರ್ಥಿಗಳಿಗೆ ಕ್ಷಮೆ ಕೇಳಿ. ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.



